Sunday, September 11, 2022

 ಇಂದು *ವಿಶ್ವ ಜಲ ದಿನ*

-------------------------------

   

*ಮಾರ್ಚ್ 22 ರಂದು, ವಿಶ್ವ ಜಲ ದಿನ* ವನ್ನಾಗಿ ಆಚರಿಸಲಾಗುವುದು. ಇದು ಭೂಮಿಯ ಅತ್ಯಂತ ಪ್ರಮುಖ ಸಂಪನ್ಮೂಲದ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುತ್ತದೆ. ಪ್ರಪಂಚದ ಎಲ್ಲಾ ನಿವಾಸಿಗಳಿಗೆ ಶುದ್ಧ ನೀರಿನ ಮೂಲಗಳನ್ನು ಖಾತ್ರಿಪಡಿಸುವುದು ವಿಶ್ವ ಜಲ ದಿನದ ಗುರಿಯಾಗಿದೆ.


ನೀರಿನ ಬಳಕೆ ,ಉಳಿಕೆ ಮತ್ತು ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮಾರ್ಚ್‌ 22ರಂದು ವಿಶ್ವ ಜಲ ದಿನವನ್ನು ಆಚರಿಸಲಾಗುತ್ತದೆ. *1993ರಲ್ಲಿ ಬ್ರೆಜಿಲ್‌ನ ರಿಯೋದಲ್ಲಿ ನಡೆದ ವಿಶ್ವಸಂಸ್ಥೆಯ ಪರಿಸರ ಮತ್ತು ಅಭಿವೃದ್ಧಿ ಸಮಾವೇಶದಲ್ಲಿ ಜಲ ಸಂರಕ್ಷಣೆಯ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಯಿತು* ಹಾಗೂ ಪ್ರತಿ ವರ್ಷ ಮಾರ್ಚ್‌ 22 ರಂದು ವಿಶ್ವ ಜಲ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು.


ಪ್ರಕೃತಿಯನ್ನು ಉಳಿಸಿ ನೀರನ್ನು ಸಂರಕ್ಷಿಸಬೇಕಾಗಿದೆ. ಏಕೆಂದರೆ ವಿಶ್ವದ ಸಕಲ ಜೀವರಾಶಿಗಳಿಗೆ ನೀರು ಜೀವನಾಧಾರ. *ಜಲವೇ ಸಂಜೀವಿನಿ*. ನಮ್ಮ ಭಾರತದಲ್ಲಿ ನೀರಿಗೆ ದೈವೀ ಸ್ಥಾನವನ್ನು ನೀಡಲಾಗಿದೆ. ಸಂಶೋಧನೆ ಪ್ರಕಾರ *ಭೂಮಿ ಮಾತ್ರ ಮಾನವ ಯೋಗ್ಯ ತಾಣ ಮತ್ತು ಶುದ್ಧ ಸಿಹಿ ನೀರು ಸಿಗುವ ಏಕೈಕ ಗ್ರಹ.* ಭೂಮಿಯಲ್ಲಿ ಉಪಯೋಗಿಸಬಹುದಾದ ಸಿಹಿ ನೀರಿನ ಅಂಶ ಬಹಳ ಕಡಿಮೆ ಇದೆ.


  ಬೆಳೆಯುತ್ತಿರುವ ಜನಸಂಖ್ಯೆ, ಜಾಗತಿಕ ತಾಪಮಾನ, ಪರಿಸರ ಮಾಲಿನ್ಯ, ಕೈಗಾರಿಕರಣ, ಅರಣ್ಯನಾಶ ಇನ್ನಿತರ ಕಾರಣಗಳಿಂದ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಿದೆ. ಬೇಸಿಗೆ ಶುರುವಾಗುವ ಮುಂಚೆಯೇ ನೀರಿನ ಕೊರತೆ ಕಂಡುಬರುತ್ತಿದೆ. ನಮ್ಮ ಭಾರತದಲ್ಲಿ ಎಷ್ಟೋ ಗ್ರಾಮಗಳಲ್ಲಿ ಇಂದಿಗೂ ನೀರಿನ ಕೊರತೆಯ ತೀವ್ರ ಸಮಸ್ಯೆ ಇದೆ. *ನೀರನ್ನು ಅನವಶ್ಯಕವಾಗಿ ಪೋಲುಮಾಡದೆ ಹನಿ ಹನಿ ನೀರನ್ನು ಸಂರಕ್ಷಿಸುವುದು, ಮುಂದಿನ ಪೀಳಿಗೆಗೆ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯ ವಾಗಿದೆ.*

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು