Tuesday, November 1, 2022

 



ಕರ್ನಾಟಕದ ಜನತೆಗೆ ನವೆಂಬರ್ 1 ಹೆಮ್ಮೆಯ ದಿನವಾಗಿದೆ. ಪ್ರತಿ ವರ್ಷ ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ಬಹಳ ಅದ್ಧೂರಿಯಿಂದ ಆಚರಣೆ ಮಾಡಲಾಗುತ್ತದೆ. ಈ ದಿನದಂದು ಇಡಿ ಕರ್ನಾಟಕದ ಪ್ರತಿ ಮನೆಯಲ್ಲೂ ಹಬ್ಬದ ರೀತಿಯಲ್ಲಿ ರಾಜ್ಯೋತ್ಸವವನ್ನು ಆಚರಣೆ ಮಾಡುತ್ತಾರೆ. ಈ ಬಾರಿ ರಾಜ್ಯ ಸರ್ಕಾರ ಕೋಟಿ ಕಂಠ ಗಾಯನ ಎನ್ನುವ ವಿಶಿಷ್ಟ ಕಾರ್ಯಕ್ರಮದ ಮೂಲಕ 67ನೇ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ

ಸ್ನೇಹಿತರೆ ನಮ್ಮ ಕನ್ನಡ ನಾಡು ಶ್ರೀಗಂಧದ ಬೀಡು. ಕರುನಾಡು, ಕನ್ನಡ ನಾಡು, ಕನ್ನಡಾಂಭೆಯ ನಾಡು ಎಂಬೆಲ್ಲ ಹೆಸರುಗಳಿಂದ ಕರೆಯಲ್ಪಡುತ್ತದೆ. ಹಚ್ಚಹಸುರಿನ ಸುಂದರ ಬೆಟ್ಟ ಗುಡ್ಡಗಳು ಗೂಡು, ಪವಿತ್ರ ಕಾವೇರಿ, ತುಂಗಭದ್ರೆ ನದಿಗಳು ಹರಿಯುವ, ಸಾಧು-ಸಂತರು, ದಾಸರು, ಶಿವಶರಣರು, ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ ಈ ನಾಡಿಗಿದೆ.

ಇಂತಹ ನಾಡಲ್ಲಿ ಹುಟ್ಟಿರುವುದು ನಮ್ಮೆಲ್ಲರ ಅದೃಷ್ಟ. ನವೆಂಬರ್ 1 ರಂದು ನಾವೆಲ್ಲರೂ ಅತ್ಯಂತ ಸಡಗರ, ಸಂಭ್ರಮದಿಂದ ಎಲ್ಲ ಜಾತಿ ಮತ ಧರ್ಮಗಳ ಜನರು ಸೇರಿ ಒಗ್ಗೂಡಿ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತೇವೆ.


ಸ್ನೇಹಿತರೆ ಈ ಸಂದಂರ್ಭದಲ್ಲಿ ನಾವು ನಮ್ಮ ಕನ್ನಡ ನಾಡು, ನುಡಿ, ಭಾಷೆ ನವೆಂಬರ್‌ನಲ್ಲೇ ಏಕೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ ಎನ್ನುವ ಬಗ್ಗೆಯೂ ತಿಳಿದುಕೊಳ್ಳಲೇಬೇಕು

.ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವ ಅಥವಾ ಕನ್ನಡ ದಿನ ಎಂದು ಆಚರಿಸಲಾಗುತ್ತದೆ. ಇದನ್ನು ಕರ್ನಾಟಕ ರಚನೆಯ ದಿನ ಅಥವಾ ಕರ್ನಾಟಕ ದಿನ ಎಂದು ಕರೆಯಲಾಗುತ್ತದೆ. 1956 ರಲ್ಲಿ ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ ಮಾಡತನಾಡುವ ಪ್ರದೇಶಗಲನ್ನು ವಿಲೀನಗೊಳಿಸಿ ಮೈಸೂರು ರಾಜ್ಯವನ್ನು ರಚಿಸಲಾಯಿತು.

ಕರ್ನಾಟಕ ಹೆಸರು ಬಂದಿದ್ದು ಹೇಗೆ?

ಕರ್ನಾಟಕ ಪದದ ಮೂಲ ಸಂಸ್ಕೃತ. ಸಂಸ್ಕೃತದ ಕನ್ನಡ ಎಂಬ ಪದದಿಂದ ಕರ್ನಾಟಕ ಹುಟ್ಟಿದೆ. ಕನ್ನಡಿಗರ ನಾಡು, ಕನ್ನಾಡು, ಕನ್ನಡ ನಾಡು ಎಂಬುದು ಇದರ ಅರ್ಥ. ಆದರೆ ಕರ್ನಾಟಕ ಎಂಬ ಪದದ ಹುಟ್ಟು ಅಥವಾ ಅರ್ಥದ ಬಗ್ಗೆ ಇನ್ನೂ ಹಲವು ಅಭಿಪ್ರಾಯಗಳು ಇವೆ. ಕರು + ನಾಡು = ಕರುನಾಡು ಎಂಬ ಪದವು ಕರ್ನಾಟಕವಾಯಿತು ಎನ್ನಲಾಗುತ್ತದೆ. ಕರು ಎಂದರೆ ಕಪ್ಪು, ಇದರರ್ಥ ಕಪ್ಪು ಮಣ್ಣಿನ ನಾಡು ಎಂದೂ ಸಹ ಹೇಳಲಾಗುತ್ತದೆ. ಹಳೆಯ ಗ್ರಂಥಗಳು ಇದನ್ನು ಕರ್ನಾಟ ಎಂಬ ಪದದಿಂದ ಪಡೆಯಲಾಗಿದೆ ಎಂದು ಸೂಚಿಸುತ್ತವೆ. ಕೆಲವು ಮೂಲಗಳು ಕರ್ನಾಟಕವನ್ನು ಎತ್ತರದ ಭೂಮಿಗೆ ಅನುವಾದಿಸುತ್ತದೆ

ಸ್ನೇಹಿತರೇ ಕನ್ನಡಿಗರ ನಾಡನ್ನು ಮೈಸೂರು ರಾಜ್ಯದಿಂದ ಕರ್ನಾಟಕ ಎಂದು ಹೆಸರಿಡಬೇಕು ಎಂದು ಮೊದಲು 1972 ರ ಜುಲೈನಲ್ಲಿ ಈ ಬಗ್ಗೆ ಚರ್ಚೆ ಭುಗಿಲೆದ್ದತ್ತು. ದೀರ್ಘಾವಧಿಯ ಚರ್ಚೆಗಳ ನಂತರ ರಾಜ್ಯ ವಿಧಾನಸಭೆಯಲ್ಲೂ ಇದಕ್ಕೆ ಸರ್ವಾನುಮತದಿಂದ ಅನುಮತಿ ದೊರೆಯಿತು.

ಕರ್ನಾಟಕ ಹುಟ್ಟಿಗೆ ಆಲೂರು ವೆಂಕಟರಾವ್‌ ಅವರು ಮೊದಲಿಗೆ ಕರ್ನಾಟಕ ಏಕೀಕರಣ ಚಳುವಳಿಯನ್ನು ಸ್ವಾತಂತ್ರ್ಯ ಪೂರ್ವವೇ 1905 ರಲ್ಲಿ ಆರಂಭಿಸಿದರು. 1950 ರಲ್ಲಿ ಭಾರತವು ಗಣರಾಜ್ಯವಾಯಿತು. ಮತ್ತು ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ದೇಶದಲ್ಲಿ ವಿವಿಧ ಪ್ರಾಂತ್ಯಗಳು ರಚನೆಯಾದವು. ಇದು ಮೈಸೂರು ರಾಜ್ಯಕ್ಕೆ ಜನ್ಮ ನೀಡಿತು.

ನವೆಂಬರ್ 01, 1956 ರಂದು ಮೈಸೂರು ಸಂಸ್ಥಾನವು ಹಿಂದಿನ ಮೈಸೂರು ಸಂಸ್ಥಾನದ ಬಹುತೇಕ ಪ್ರದೇಶವನ್ನು ಒಳಗೊಂಡಿತ್ತು. ಉತ್ತರ ಕರ್ನಾಟಕದ ಜನರು ಮೈಸೂರು ಹೆಸರನ್ನು ಉಳಿಸಿಕೊಳ್ಳಲು ಒಲವು ತೋರಲಿಲ್ಲ. ಏಕೆಂದರೆ ಇದು ಹಿಂದಿನ ಸಂಸ್ಥಾನದ ಮತ್ತು ಹೊಸ ರಾಜ್ಯದ ದಕ್ಷಿಣ ಪ್ರದೇಶಗಳೊಂದಿಗೆನಿಕಟ ಸಂಬಂಧ ಹೊಂದಿತ್ತು. ಈ ತರ್ಕಕ್ಕೆ ಅನುಗುಣವಾಗಿ, ರಾಜ್ಯದ ಹೆಸರನ್ನು ಕರ್ನಾಟಕ ಎಂದು ನವೆಂಬರ್ 1 ರಂದು 1973 ಬದಲಾಯಿಸಲಾಯಿತು. ಈ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಾಗ ದೇವರಾಜ್ ಅರಸು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದರು.


ಇನ್ನು ಕರ್ನಾಟಕ ಏಕೀಕರಣಕ್ಕೆ ಕೀರ್ತಿ ಪಡೆದ ಇತರ ವೈಕ್ತಿಗಳಲ್ಲಿ ಕೆ ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ ಎನ್‌ ಕೃಷ್ಣ ರಾವ್ ಮತ್ತು ಬಿ ಎಂ ಶ್ರೀ ಕಂಠಯ್ಯ ಪ್ರಮುಖರು

ಸ್ನೇಹಿತರೆ ನವೆಂಬರ್ 1 ರಂದು ರಾಜ್ಯದಾದ್ಯಂತ ರಾಜ್ಯೋತ್ಸವ ದಿನವನ್ನು ಅತ್ಯಂತ ಸಂತೋಷ ಮತ್ತು ಸಡಗರದಿಂದ ಆಚರಿಸಲಾಗುತ್ತದೆ. ಕೆಂಪು ಮತ್ತು ಹಳದಿ ಕನ್ನಡ ಧ್ವಜಗಳನ್ನು ರಾಜ್ಯದಾದ್ಯಂತ ವಿವಿಧ ಆಯಕಟ್ಟಿನ ಸ್ಥಳಗಳಲ್ಲಿ ಹಾರಿಸಲಾಗುತ್ತದೆ. ಮತ್ತು ಕನ್ನಡ ಗೀತೆಯನ್ನು 'ಜಯ ಭಾರತ ಜನನೀಯ ತನುಜಾತೆ, ಜಯಹೇ ಕರ್ನಾಟಕ ಮಾತೆ' ಹಾಡುವುದರಿಂದ ಇಡೀ ರಾಜ್ಯವು ಈ ದಿನದಂದು ಕನ್ನಡದ ಹಬ್ಬವನ್ನು ಆಚರಿಸಲಾಗುತ್ತದೆ.

ನಾವು ಕೇವಲ ನವೆಂಬರ್ ಕನ್ನಡಿಗರಾಗದೇ, ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುತ್ತೇನೆ, ಬರೆಯುತ್ತೇನೆ, ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುತ್ತೇನೆ, ಕನ್ನಡೇತರರಿಗೆ ಕನ್ನಡ ಕಲಿಸುತ್ತೇನೆ, ಕನ್ನಡ ನುಡಿ , ಸಂಸ್ಕೃತಿ, ಪರಂಪರೆ ಉಳಿಸಲು ಸದಾ ಕಟಿಬದ್ಧರಾಗಿರುತ್ತೇವೆ ಎಂದು ಇದೇ ವೇಳೆ ಪ್ರಮಾಣ ಮಾಡೋಣ


No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು