Saturday, June 17, 2023

 *ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ.!*

ಒಂದು ಕಾಡಿನಲ್ಲಿ ಒಂದು ಕಾಗೆ ವಾಸವಾಗಿತ್ತು. ಅದರ ಜೀವನ ಸೊಗಸಾಗಿ ಸಾಗುತ್ತಿತ್ತು. ಆದರೆ ಪಕ್ಕದಲ್ಲೇ ಇದ್ದ ಕೊಳದಲ್ಲಿನ ಹಂಸವನ್ನು ನೋಡಿ ‘ಅದು ತುಂಬಾ ಬೆಳ್ಳಗೆ, ಸುಂದರವಾಗಿ ಇದೆ. ನಾನು ಕಪ್ಪಗಿದ್ದೇನೆ’ ಎಂದು ನೋವನುಭವಿಸುವುದನ್ನು ಆರಂಭಿಸಿತು. ಒಂದು ದಿನ ಹಂಸದ ಬಳಿ ಹೋಗಿ ‘ನೀನು ತುಂಬಾ ಸುಂದರವಾಗಿ ಇರುತ್ತೀಯ. ಆನಂದವಾಗಿಯೂ ಇರುತ್ತೀಯ ಅಲ್ಲವೇ’ ಎಂದಿತು. ಕಾಗೆ ಮಾತಿಗೆ ಹಂಸ ಉತ್ತರ ಕೊಡುತ್ತಾ, ‘ನಿಜ ನಾನು ಸುಂದರವಾಗಿರುತ್ತೇನೆ. ಆದರೆ ಗಿಳಿರಾಮ ನನಗಿಂತಲೂ ಎರಡು ಬಣ್ಣಗಳಲ್ಲಿ ಸುಂದರವಾಗಿರುತ್ತದೆ. ಅದರ ಜತೆ ಹೋಲಿಸಿದರೆ ನಾನೇನು ಅಲ್ಲ’ ಎಂದು ಬೇಸರಿಸಿಕೊಂಡಿತು. ಇದನ್ನು ಕೇಳಿದ ಕಾಗೆ ಗಿಳಿ ಬಳಿಗೆ ಹೋಗಿ, ‘ಹಂಸಕ್ಕಿಂತಲೂ ಸುಂದರವಾಗಿ ನೀನಿದ್ದೀಯ’ ಎಂದಿತು.

ಈ ಮಾತಿಗೆ ಗಿಳಿ, ‘ನನ್ನದೇನಿದೆ ಕೇವಲ ಎರಡು ಬಣ್ಣಗಳು. ನವಿಲು ಬಣ್ಣಬಣ್ಣದ ಗರಿಗಳಿಂದ ತುಂಬಾ ಸುಂದರವಾಗಿರುತ್ತದೆ. ಅದನ್ನು ನೋಡಲು ಜನ ಪೈಪೋಟಿ ಬೀಳುತ್ತಿರುತ್ತಾರೆ. ‘ ಎಂದಿತು. ನವಿಲನ್ನು ನೋಡಲು ಕಾಗೆ ಜೂಗೆ ಹೋಯಿತು. ಅಲ್ಲಿ ಅದನ್ನು ನೋಡಲು ಜನ ಗುಂಪು ಗುಂಪಾಗಿದ್ದಾರೆ. ಅವರೆಲ್ಲಾ ಹೊರಟು ಹೋದ ಮೇಲೆ ನವಿಲಿನೊಂದಿಗೆ ಕಾಗೆ, ‘ನೀನು ಹಂಸ, ಗಿಳಿಗಿಂತಲೂ ತುಂಬಾ ಸುಂದರವಾಗಿದ್ದೀಯ. ನೀನು ಅದೃಷ್ಟವಂತೆ. ನಿನ್ನ ನೋಡಲು ಜನರೆಲ್ಲಾ ಬರುತ್ತಿದಾರೆ.’ ಇದರಿಂದ ನವಿಲು ಭಯದಿಂದ ‘ಹಾಂ ಏನು ಅದೃಷ್ಟ ಬಿಡಮ್ಮ…ಸುಂದರವಾಗಿದ್ದೀನಿ ಎಂದು ಈ ಜೂನಲ್ಲಿ ನನ್ನನ್ನು ತಂದು ಹಾಕಿದ್ದಾರೆ. ಇಲ್ಲಿ ಒಂದೇ ಒಂದು ಕಾಗೆ ಸಹ ಇಲ್ಲ. ಅವೆಲ್ಲಾ ಹಾಯಾಗಿ ಹೊರಗಿನ ಪ್ರಪಂಚದಲ್ಲಿ ಓಡಾಡಿಕೊಂಡಿವೆ. ನಾನು ಕಾಗೆಯಾಗಿ ಯಾಕೆ ಹುಟ್ಟಲಿಲ್ಲ ಎಂದು ಎಷ್ಟೋ ಸಲ ವ್ಯಥೆ ಪಟ್ಟಿದ್ದೇನೆ. ‘ ಎಂದು ನವಿಲು ಹೇಳಿದ ಬಳಿಕ ಕಾಗೆಗೆ ಜ್ಞಾನೋದಯವಾಯಿತು.

ಮನುಷ್ಯರಲ್ಲೂ ಇತರರೊಂದಿಗೆ ತಮ್ಮನ್ನು ಹೋಲಿಸಿಕೊಳ್ಳುವವರಿಗೇನು ಬರವಿಲ್ಲ. ಈ ರೀತಿ ಮಾಡುತ್ತಾ ತಮ್ಮಲ್ಲಿನ ಜ್ಞಾನವನ್ನು, ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಾರೆ. ಅವರವರ ವಿಶೇಷತೆ ಅವರಿಗೆ ಇದ್ದೇ ಇರುತ್ತದೆ. ಅವರವರ ಸಮಸ್ಯೆಗಳೂ ಅವರವರಿಗೆ ಇರುತ್ತವೆ. ನಮಗೆ ಲಭ್ಯವಿರುವ ಸೌಲಭ್ಯಗಳನ್ನು ಬಳಸಿಕೊಂಡು ಸದ್ಭಳಕೆ ಮಾಡಿಕೊಂಡರೆ ಸಂತೃಪ್ತಿಯಾಗಿ ಜೀವಿಸಬಹುದು . ನೀವೇನಂತೀರಿ?

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು