Friday, September 1, 2023

 ಹಾವಿನ ಕೋಪ

ಒಬ್ಬ ಮರದ ಕೆಲಸದವನು ರಾತ್ರಿ ತನ್ನ ಕೆಲಸವನ್ನು ಮುಗಿಸಿ ಎಂದಿನಂತೆ ತನ್ನ ಅಂಗಡಿಯನ್ನು ಮುಚ್ಚಿ ಮನೆಗೆ ಹೋಗುತ್ತಾನೆ. ಆ ಹೊತ್ತಿನಲ್ಲಿ ಒಂದು ದೊಡ್ಡ ಹಾವೊಂದು ಅಂಗಡಿಗೆ ನುಗ್ಗುತ್ತದೆ. ಅಲ್ಲಿ ತನಗೆ ಏನಾದರೂ ಆಹಾರ ಸಿಗಬಹುದೆಂದು ಅತ್ತ ಇತ್ತ ತಿರುಗುತ್ತದೆ. ಹಾವು ಹಾಗೆ ತಿರುಗುತ್ತಿರುವಾಗ, ಅಲ್ಲಿರುವ ಎರಡು ಬದಿಯಲ್ಲಿಯೂ ಹರಿತವಾಗಿರುವ ಒಂದು ಗರಗಸಕ್ಕೆ ತಾಗಿ ಅದಕ್ಕೆ ಸಣ್ಣದಾದ ಗಾಯವಾಗುತ್ತದೆ. ಹಾವಿಗೆ ಸಿಟ್ಟು ಬಂದು ಆ ಗರಗಸಕ್ಕೆ ಕಚ್ಚುತ್ತದೆ. ಆಗ ಅದರ ಬಾಯಿಗೆ ಕೂಡ ಗಾಯವಾಗುತ್ತದೆ. ಇದರಿಂದ ಹಾವಿನ ಸಿಟ್ಟು ಮತ್ತಷ್ಟು ಹೆಚ್ಚಾಗುತ್ತದೆ. ಕೂಡಲೇ ಅದು ಆ ಗರಗಸಕ್ಕೆ ಗಟ್ಟಿಯಾಗಿ ಸುತ್ತಿಕೊಂಡು ತನ್ನ ಹಿಡಿತವನ್ನು ಬಲಪಡಿಸುತ್ತದೆ. ಮರುದಿನ ಬೆಳಿಗ್ಗೆ ಮರದ ಕೆಲಸದವನು ತನ್ನ ಅಂಗಡಿಯನ್ನು ತೆರೆದಾಗ ಅವನಿಗೆ ಗರಗಸದಲ್ಲಿ ಸುತ್ತಿಕೊಂಡು ಸತ್ತಿದ್ದ ಹಾವು ಕಾಣುತ್ತದೆ.

ಆದರೆ ಹಾವು ಬೇರೆಯವರ ಆಕ್ರಮಣದಿಂದ ಸಾಯಲಿಲ್ಲ, ಬದಲಿಗೆ ತನ್ನದೇ ಆದ ಸಿಟ್ಟು ಮತ್ತು ಹಠದಿಂದ ಸತ್ತಿತ್ತು.

ನಮಗೆ ಕೂಡ ಸಿಟ್ಟು ಬಂದಾಗ ನಾವು ಸಹಿತ ಆ ಹಾವಿನ ಹಾಗೆ, ಸಿಟ್ಟು ಮತ್ತು ಹಗೆಯಿಂದ ಎದುರಾಳಿಗೆ ನಷ್ಟ ಮಾಡಲು ಪ್ರಯತ್ನ ಪಡುತ್ತೇವೆ. ಆದರೆ ಸ್ವಲ್ಪ ಸಮಯದ ನಂತರ ಅದರಿಂದಾಗಿ ನಮಗೆ ಹೆಚ್ಚು ಹಾನಿಯಾದದ್ದು ಗಮನಕ್ಕೆ ಬರುತ್ತದೆ.

ನಾವು ಸಂತೋಷದಿಂದ ಜೀವಿಸಲು ಕೆಲವೊಂದು ವಸ್ತು, ಜನರು, ಘಟನೆ ಹಾಗು ವಿಷಯಗಳನ್ನು ಕಡೆಗಣಿಸಬೇಕಾಗುತ್ತದೆ.

ನಾವು ಪ್ರತಿಕ್ರಿಯೆ ತೋರಿಸುವ ಅಗತ್ಯತೆ ಇದ್ದಲ್ಲಿ ಮಾತ್ರ ಪ್ರತಿಕ್ರಿಯೆ ತೋರಿಸಬೇಕೆ ವಿನಹ ಎಲ್ಲದಕ್ಕೂ ಪ್ರತಿಕ್ರಿಯೆ ತೋರಿಸಲು ಹೋದಲ್ಲಿ ಅನವಶ್ಯಕವಾಗಿ ನಾವು ಹಾನಿಗೊಳಬೇಕಾಗುವ ಪ್ರಸಂಗವೂ ಬರಬಹುದು.

ನೀತಿ : “ತಾಳ್ಮೇ ಜಗತ್ತಿನ ಅತೀ ಶ್ರೇಷ್ಟ ಪ್ರಾರ್ಥನೆ ”

 

ಆಧಾರ : ವಾಟ್ಸಾಪ್

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು