Thursday, September 14, 2023

 ಪ್ರಯತ್ನದ ಧ್ಯೇಯ ಅದೃಷ್ಟದ ಒಲವು 

    


   ಹಾವಾಡಿಗನೊಬ್ಬ ವಿಷಪೂರಿತ ಹಾವನ್ನು ಕಷ್ಟಪಟ್ಟು ಹಿಡಿದು ಬಿದಿರುಬುಟ್ಟಿಗೆ ಹಾಕಿ ಮನೆಯ ಮೂಲೆಯಲ್ಲಿಟ್ಟ. ಅದರ ವಿಷದ ಮದ ಇಳಿಸಲು ವಾರಗಟ್ಟಲೆ ಆಹಾರವನ್ನೇ ಕೊಡದೆ ಹಾಗೇ ಬಿಟ್ಟಿದ್ದ. ಹೀಗೆ ಆಹಾರವಿಲ್ಲದೆ, ಬಿಡುಗಡೆಯೂ ಇಲ್ಲದೆ ಬದುಕುವಾಸೆ ಬಿಟ್ಟು ಸತ್ತಂತೆ ಮುದ್ದೆಯಾಗಿ ಬಿದ್ದಿತ್ತು ಹಾವು. ಒಂದು ರಾತ್ರಿ ಇಲಿಯೊಂದು ಆಹಾರಕ್ಕೆಂದು ಹಾವಾಡಿಗನ ಮನೆ ಪ್ರವೇಶಿಸಿತು. ಎಷ್ಟು ಹುಡುಕಿದರೂ ಆಹಾರ ಸಿಗದೆ, ಇನ್ನೇನು ಹೊರಡಬೇಕೆಂದಿದ್ದಾಗ ಹಾವನ್ನಿರಿಸಲಾಗಿದ್ದ ಬುಟ್ಟಿ ಕಾಣಿಸಿತು. ಇದರಲ್ಲಿ ಧಾನ್ಯವೇ ಇರಬೇಕು ಎಂದು ಭಾವಿಸಿ ಕನ್ನ ಕೊರೆದು ಒಳಹೊಕ್ಕರೆ ಆಗಿದ್ದೇನು? ಆಹಾರ ಹುಡುಕಿ ಹೋದ ಇಲಿಯೇ, ಆ ಬುಟ್ಟಿಯಲ್ಲಿದ್ದ ಹಾವಿಗೆ ಆಹಾರವಾಯಿತು. ಅಷ್ಟೇ ಅಲ್ಲ, ಹೊಟ್ಟೆ ತುಂಬಿಸಿಕೊಂಡ ಹಾವು ಆ ಇಲಿ ಕೊರೆದಿದ್ದ ಕಿಂಡಿಯಿಂದಲೇ ತೂರಿ ಕೊಂಡು ಪಲಾಯನ ಮಾಡಿತು. ಹಾವಿನ ಉಳಿಗಾಲಕ್ಕೂ, ಇಲಿಯ ಜೀವನಾಶಕ್ಕೂ ಒಂದೇ ಸಂದರ್ಭ ಸಾಕ್ಷಿಯಾಗಿ ಹೋಯಿತು.

ಹಾವಿಗೊದಗಿದ ಅದೃಷ್ಟ ಅಥವಾ ಇಲಿಗೊದಗಿದ ದುರದೃಷ್ಟದಂಥ ಸಂದರ್ಭ ಬದುಕಿನಲ್ಲಿ ಯಾರಿಗೆ ಬೇಕಾದರೂ ಒದಗಬಹುದು. ಜೀವನದಲ್ಲಿ ಅದೃಷ್ಟ ಬರಬಹುದು ಹಾಗಂತ ಅದನ್ನೇ ನಂಬಿ ಕೂರುವಂತಿಲ್ಲ.

ಹಾಗೆ ನಿರೀಕ್ಷೆಯಿಟ್ಟುಕೊಂಡಲ್ಲಿ ಮುಂದೊಂದು ದಿನ ಪರಿತಪಿಸಬೇಕಾದೀತು. ಕೆಲವೊಮ್ಮೆ ಹೆಚ್ಚು ಪ್ರಯತ್ನ-ಪರಿಶ್ರಮವನ್ನು ವಿನಿಯೋಗಿಸಿದಾಗಲೂ ಅಂದುಕೊಂಡ ಫಲಿತಾಂಶ ಸಿಗದಿರಬಹುದು. ಇಂಥ ಸಂದರ್ಭಗಳಲ್ಲಿ ನೊಂದುಕೊಳ್ಳದೆ ಹತಾಶರಾಗದೆ, ನಾವು ಎಡವಿದ್ದೆಲ್ಲಿ, ನಮ್ಮ ಪ್ಯಯತ್ನವನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳುವ ಅವಕಾಶವಿದೆಯೇ ಎಂಬುದರ ಅವಲೋಕನವಾಗಬೇಕು.Fortune favours the bold ("ಅದೃಷ್ಟವು ಪ್ರಯತ್ನವಾದಿಯನ್ನು ಬೆಂಬಲಿಸುತ್ತದೆ") ನಾವು ಧೈರ್ಯ ಉತ್ತಮ ಪ್ರಯತ್ನಗಳಿಂದ ಮುನ್ನಡೆದಾಗ ಉತ್ತಮ ಫಲ ಇದ್ದೇ ಇರುತ್ತದೆ... ಮೇಲೆ ನೀಡಿರುವ ನಿದರ್ಶನದಲ್ಲಿ ಇಲಿಯು ಆಹಾರವನ್ನು ಪಡೆಯುವ ಯತ್ನವನ್ನೇನೋ ಮಾಡಿತು, ಆದರೆ ಅದೃಷ್ಟ ಕೈಕೊಟ್ಟು ಪ್ರಾಣ ಕಳೆದುಕೊಳ್ಳುವಂಥ ಸ್ಥಿತಿ ಬಂತು. ಹಾಗೆ ನೋಡಿದರೆ, ಅದೃಷ್ಟ-ದುರದೃಷ್ಟಗಳ ಸರಮಾಲೆಯೇ ನಮ್ಮ ಬದುಕು. ಅದೃಷ್ಟ ಬಂದಾಗ ಅತಿಯಾಗಿ ಹಿಗ್ಗದೆ, ದುರದೃಷ್ಟ ಅಪ್ಪಳಿಸಿದಾಗ ಪಾತಾಳಕ್ಕೆ ಕುಸಿಯದೆ, ಸಮತ್ವವನ್ನು ಕಾಯ್ದುಕೊಳ್ಳುವದೇ ವಿವೇಕತನ.👍💐💐

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು