Saturday, May 11, 2024

 ಕಥೆ-393

ರಾಷ್ಟ್ರೀಯ ತಂತ್ರಜ್ಞಾನ ದಿನ

1998 ಮೇ 11 ಭಾರತದ ಪಾಲಿಗೆ ಅತ್ಯಂತ ಮಹತ್ವದ ದಿನ. ಅಂದು ಭಾರತವು ರಾಜಸ್ಥಾನದ ಪೊಖ್ರಾನ್‌ನಲ್ಲಿ ಸರಣಿ ಅಣುಬಾಂಬ್‌ ಸ್ಫೋಟದ ಪರೀಕ್ಷೆಗಳನ್ನು ಯಸಸ್ವಿಯಾಗಿ ನಡೆಸಿತು. ಅಷ್ಟೇ ಅಲ್ಲದೆ ಅದೇ ದಿನ ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ 'ಹನ್ಸಾ-3' ಹೆಲಿಕಾಪ್ಟರಿನ ಯಶಸ್ವಿ ಹಾರಾಟ ನಡೆಸಿತು ಹಾಗೂ ಅದೇ ದಿನ ಸಂಪೂರ್ಣ ಸ್ವದೇಶಿ ನಿರ್ಮಿತ ತ್ರಿಶೂಲ್‌ ಕ್ಷಿಪಣಿಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಈ ಎಲ್ಲ ತಾಂತ್ರಿಕ ಸಾಧನೆಗಳ ಹಿನ್ನೆಲೆಯಲ್ಲಿ 1998 ಮೇ 11ರಿಂದ ರಾಷ್ಟ್ರೀಯ ತಂತ್ರಜ್ಞಾನ ದಿನವಾಗಿ ಆಚರಿಸಲಾಗುತ್ತಿದೆ. 

ಭಾರತವು ತಂತ್ರಜ್ಞಾನ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಅಂದಿನ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಘೋಷಿಸಿದರು. ವಿಜ್ಞಾನ , ಸಮಾಜ ಮತ್ತು ಇಂಡಸ್ಟ್ರಿಗಳ ಏಕೀಕರಣದ ಸಂಕೇತವಾಗಿ, ವೈಜ್ಞಾನಿಕ ಸಂಶೋಧನೆ ಮತ್ತು ತಾಂತ್ರಿಕ ಸೃಜನಶೀಲತೆಯ ಗೌರವವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ.

ಭಾರತವು ಅಣುಬಾಂಬ್‌ ಸ್ಫೋಟ, ಕ್ಷಿಪಣಿ ಉಡಾವಣೆ, ವಿಮಾನಗಳ ನಿರ್ಮಾಣ , ಕೃಷಿ, ನೀರಾವರಿ ಸೇರಿದಂತೆ ತಂತ್ರಜ್ಞಾನ ಕ್ಷೇತ್ರದಲ್ಲಿ ಅಪರಿಮಿತ ಸಾಧನೆ ಮಾಡುವ ಮೂಲಕ ಜಗತ್ತಿನ ಸೂಪರ್‌ ಪವರ್‌ ರಾಷ್ಟ್ರವಾಗಿ ಹೊರಹೊಮ್ಮಿದ್ದು, ತಾಂತ್ರಿಕ ಕ್ಷೇತ್ರದಲ್ಲಿ ಎದುರಾಗುವ ಎಲ್ಲ ಅಡ್ಡಿಗಳನ್ನು ಸಮರ್ಥವಾಗಿ ಎದುರಿಸಲು ಸಮರ್ಥವಾಗಿದೆ.

ಭಾರತವು 'ನ್ಯೂಕ್ಲಿಯರ್ ರಾಷ್ಟ್ರಗಳ ಕ್ಲಬ್'ಗೆ ಸೇರ್ಪಡೆಗೊಂಡ ಆರನೇ ದೇಶವಾಗಿದೆ.

ವೈಜ್ಞಾನಿಕವಾಗಿ ಎಷ್ಟು ಮುಂದುವರೆದಿದೆಯೋ ಅಷ್ಟೇ ಮೂಡನಂಬಿಕೆಗಳ ಆಗರವು ಆಗಿದೆ. ಕೆಲವರ ಹೊಟ್ಟೆಪಾಡಿಗಾಗಿ ಮೂಢನಂಬಿಕೆಗಳು ಹಾಗೆ ಮುಂದುವರೆಯುತ್ತಿವೆ. ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಂಡು

ವೈಜ್ಞಾನಿಕ ಚಿಂತನೆಯೊಂದಿಗೆ ನಡೆಯುವುದು ಅವಶ್ಯವಾಗಿದೆ. ಮೂಡನಂಬಿಕೆಗಳನ್ನು ಹೊಡೆದೋಡಿಸೋಣ

ಮಕ್ಕಳಲ್ಲಿ ತಂತ್ರಜ್ಞಾನದ ಅರಿವು ಮೂಡಿಸುವುದರ ಜೊತೆಗೆ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ ಎಂದು ತಿಳಿಸೋಣ. ವೈಜ್ಞಾನಿಕ ಮನೋಭಾವ ಬೆಳೆಸೋಣ ತಿಳಿಸೋಣ.

ಜೈ ವಿಜ್ಞಾನ ಜೈ ತಂತ್ರಜ್ಞಾನ

💐💐💐💐💐

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು