ಕಥೆ-721
ನಿಮ್ಮ ಸಾಧನೆಗೆ ನಮ್ಮ ಸೆಲ್ಯೂಟ್
ಕೇರಳದ ಎರ್ನಾಕುಲಂನಲ್ಲಿ ಜನಿಸಿದ ಕಸ್ತೂರಿರಂಗನ್( ಡಾ. ಕೃಷ್ಣಸ್ವಾಮಿ ಕಸ್ತೂರಿರಂಗನ್) ಅವರು ಮೂರು ದಶಕಗಳ ಕಾಲ ಭಾರತೀಯ ಬಾಹ್ಯಾಕಾಶ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಕೇವಲ ಬಾಹ್ಯಾಕಾಶ ಕ್ಷೇತ್ರದಲ್ಲಷ್ಟೇ ಅಲ್ಲದೆ, ಪರಿಸರ, ಶಿಕ್ಷಣ ಮತ್ತು ಯೋಜನಾ ಆಯೋಗದಲ್ಲಿಯೂ ಇವರ ಕೊಡುಗೆ ಸ್ಮರಣೀಯವಾದದ್ದು.
ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆಯ ಉದ್ದೇಶದಿಂದ, ಸರ್ಕಾರಕ್ಕೆ ವರದಿ ನೀಡಿದ್ದರು.
ಇಸ್ರೋ ಸಂಸ್ಥೆಯನ್ನು 9 ವರ್ಷ ಮುನ್ನಡೆಸಿದ್ದ ಕಸ್ತೂರಿ ರಂಗನ್ ಅವರು ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಸಾಧಿಸಿರುವ ಅನೇಕ ದಿಗ್ವಿಜಯಗಳ ಹಿಂದಿನ ಶಕ್ತಿ ಆಗಿದ್ದರು.ಅನೇಕ ರಾಕೆಟ್ ಗಳ ಉಡಾವಣೆ,ಪರಿಸರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದೇಶಕ್ಕೆ ಅಪರಿಮಿತ ಕೊಡುಗೆ ನೀಡಿದ್ದರು.
ದೇಶದ ಅತ್ಯುನ್ಯತ ನಾಗರಿಕ ಪ್ರಶಸ್ತಿಗಳಾದ ಪದ್ಮಶ್ರೀ ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪಡೆದುಕೊಂಡಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ ಕಸ್ತೂರಿ ರಂಗನ್ ಅವರು 25/04/2025 ರಂದು ನಮ್ಮನ್ನು ಆಗಲಿದ್ದು ತುಂಬಲಾಗದ ನಷ್ಟ.
ನಿಮ್ಮ ಸಾಧನೆಗೆ ನಮ್ಮ ಸೆಲ್ಯೂಟ್
🫡🫡🫡💐💐💐
No comments:
Post a Comment