Thursday, June 26, 2025

 ಕಥೆ-769

ವ್ಯಕ್ತಿಗಿಂತ ವಿಶ್ವದಲ್ಲಿ ಆಸಕ್ತಿ ತಾಳಿರಿ'


ಜ್ಞಾನವು ಅಮೂಲ್ಯ ಸಿರಿ. ಅದರಿಂದ ಜೀವನದಲ್ಲಿ ಸುಖ, ಶಾಂತಿ, ವಿಕಾಸವಾದ ಸಿದ್ಧಾಂತದ ಪ್ರಕಾರ ಕಾಲ ಕಾಲಕ್ಕೆ ಮಾನವನ ದೇಹವಷ್ಟೇ ವಿಕಾಸವಾಗಲಿಲ್ಲ. ಅದರೊಂದಿಗೆ ಜ್ಞಾನವೂ ವಿಕಾಸವಾಯಿತು.ತನು, ಮನ, ಇವು ನಮ್ಮಲ್ಲಿರುವ ಜ್ಞಾನಸಾಧನಗಳು ಅವುಗಳನ್ನು ನಾವು ಲೌಕಿಕ ಸಿರಿ ಸಂಪದದ ಗಳಿಕೆಗಾಗಿ ಬಳಸುತ್ತೇವೆ. ಹಗಲು ರಾತ್ರಿ ಪ್ರಾಪಂಚಿಕ ಸುಖಕ್ಕಾಗಿಯೇ ದುಡಿಯುತ್ತೇವೆ. ಆದರೆ ಮಹಾತ್ಮರು ಸತ್ಯದ ಸಂಶೋಧನೆಗಾಗಿ ಹಗಲು ರಾತ್ರಿ ಶ್ರಮಿಸುತ್ತಾರೆ. ಅವರ ಪರಿಶ್ರಮದಿಂದ ಪ್ರಪಂಚವೇ ಸಂಪದ್ಭರಿತವಾಯಿತು.


ಮೇಡಂ ಕ್ಯೂರಿ ಮಹಾವಿಜ್ಞಾನಿ, ಆದರೆ ಮೈತುಂಬ ಬಟ್ಟೆ ಹೊಟ್ಟೆ ತುಂಬ ಊಟವೂ ಒಮ್ಮೊಮ್ಮೆ ಇರುತ್ತಿರಲಿಲ್ಲ ಅಂಥ ಬಡತನದಲ್ಲಿಯೇ ಅವಳು ಅದೆಷ್ಟು ನಿಷ್ಠೆಯಿಂದ ಸತ್ಯದ ಸಂಶೋಧನೆಗೆ ತೊಡಗಿದಳು! ಅದರಿಂದ ಅವರ ಮನೆತನಕ್ಕೆ ಐದು ನೊಬೆಲ್ ಮರಸ್ಕಾರಗಳು ದೊರೆತವು. ಅವಳಿಗೆ ಎರಡು, ಗಂಡನಿಗೆ ಒಂದು. ಮಗಳಿಗೆ ಒಂದು, ಅಳಿಯನಿಗೂ ಒಂದು. ಬಹುಶ ಪ್ರಪಂಚದಲ್ಲಿಯೇ ಇದೊಂದು ಅಪರೂಪದ ಘಟನೆ. ಒಂದು ದಿನ ಹಿರಿಯ ಪತ್ರಕರ್ತರು ಅವಳನ್ನು ಕಾಣಲು ಬಂದರು. ಮೇರಿ ತನ್ನ ಮನೆಯ ಮುಂದಿನ ಕೈತೋಟದಲ್ಲಿ ಕಳೆ ತೆಗೆಯುತ್ತ ಕುಳಿತಿದ್ದಳು. 'ಮೇಡಂ ಕ್ಯೂರಿ ಎಲ್ಲಿ?' ಎಂದು ಆ ಪತ್ರಕರ್ತರು ಕ್ಯೂರಿಗೆ ಕೇಳಿದರು. 'ಕ್ಯೂರಿ ಮನೆಯ ಒಳಗಿಲ್ಲ, ನೀವು ಬಂದರೆ ನಿಮಗೆ ಸಂದೇಶ ಕೊಡಲು ಹೇಳಿದ್ದಾಳೆ' ಎಂದು ಒಂದು ಸಂದೇಶ ಬರೆದುಕೊಟ್ಟಳು. 'ವ್ಯಕ್ತಿಗಿಂತ ವಿಶ್ವದಲ್ಲಿ ಆಸಕ್ತಿ ತಾಳಿರಿ' ಎಂಬುದೇ ಅವಳ ಸಂದೇಶವಾಗಿತ್ತು!

ಕೃಪೆ : ಸಿದ್ದೇಶ್ವರ ಸ್ವಾಮೀಜಿ

No comments:

Post a Comment

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು