ಕಥೆ-944
ಸಾಲು ಮರದ ತಿಮ್ಮಕ್ಕರ ನಿಧನ ಪರಿಸರಕ್ಕೆ ತುಂಬಲಾರದ ನಷ್ಟ.
https://basapurs.blogspot.com/
ಅಕ್ಷರಸ್ಥರಲ್ಲದಿದ್ದರೂ, ಪರಿಸರ ಸಂರಕ್ಷಣೆಯಲ್ಲಿ ಅವರು ಮಾಡಿದ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಮರಗಳನ್ನು ತಮ್ಮ ಮಕ್ಕಳಂತೆ ನೋಡಿಕೊಂಡು, ಅವುಗಳ ಬೆಳವಣಿಗೆಗೆ ಶ್ರಮಿಸಿದ್ದರು.
114 ವರ್ಷದ ವೃಕ್ಷಮಾತೆ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, 385 ಆಲದ ಮರಗಳು ಸೇರಿದಂತೆ 8,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿದ್ದರು. ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು.
ಸಸಿಗಳನ್ನೇ ಮಕ್ಕಳೆಂದು ಬೆಳೆಸಿದ ವೃಕ್ಷಮಾತೆ ಮಕ್ಕಳಿಲ್ಲದ ಕಾರಣಕ್ಕೆ ಸಸಿಗಳನ್ನೇ ಮಕ್ಕಳಂತೆ ಬೆಳೆಸಿ, ಪರಿಸರ ಸಂರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟವರು. ಅವರ ಈ ಅಪೂರ್ವ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ ಹಲವು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಗೌರವಗಳು ಸಂದಿವೆ.ಕರ್ನಾಟಕ ಸರ್ಕಾರವು ಅವರನ್ನು "ಪರಿಸರ ರಾಯಭಾರಿ" ಎಂದು ಘೋಷಿಸಿ, ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಿ ಗೌರವಿಸಿದೆ.
ತಿಮ್ಮಕ್ಕನವರು ಮಾಗಡಿ ತಾಲೂಕಿನಲ್ಲಿ 4.5 ಕಿ.ಮೀ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಪ್ರೇಮವನ್ನು ಮೆರೆದಿದ್ದಾರೆ.
ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವ
ಅವರ ಈ ಮಹತ್ತರ ಕಾರ್ಯವನ್ನು ಗುರುತಿಸಿ, 2019ರಲ್ಲಿ ಭಾರತ ಸರ್ಕಾರವು ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿತು.
1995ರಲ್ಲಿ ಅವರಿಗೆ ರಾಷ್ಟ್ರೀಯ ನಾಗರಿಕ ಪ್ರಶಸ್ತಿ ಸಹ ಲಭಿಸಿತು.
ಇದಲ್ಲದೆ ಇತರೆ ಪ್ರಶಸ್ತಿಗಳು 1ವೃಕ್ಷಮಿತ್ರ ಪ್ರಶಸ್ತಿ,
2.ವೀರಚಕ್ರ ಪ್ರಶಸ್ತಿ,
3.ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ,
4.ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ, 5.ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ
6.ರಾಷ್ಟ್ರೀಯ ಪೌರ ಪ್ರಶಸ್ತಿ -
7.ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ
8.ವೀರಚಕ್ರ ಪ್ರಶಸ್ತಿ
9.ಭಾರತೀಯ ವೃಕ್ಷ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆ, ಇವರಿಂದ ಶ್ಲಾಘನೆಯ ಪ್ರಮಾಣ ಪತ್ರ.
10.ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿ
11.ಗಾಡ್‌ಫ್ರಿ ಫಿಲಿಪ್ಸ್ ಧೀರತೆ ಪ್ರಶಸ್ತಿ
12.ಪಂಪಾಪತಿ ಪರಿಸರ ಪ್ರಶಸ್ತಿ
13.ಬಾಬಾಸಾಹೇಬ್ ಅಂಬೇಡ್ಕರ್ ಪ್ರಶಸ್ತಿ
14.ವನಮಾತೆ ಪ್ರಶಸ್ತಿ
15.ಮಾಗಡಿ ವ್ಯಕ್ತಿ ಪ್ರಶಸ್ತಿ
16.ಶ್ರೀಮಾತಾ ಪ್ರಶಸ್ತಿ
17.ಎಚ್.ಹೊನ್ನಯ್ಯ ಸಮಾಜ ಸೇವಾ ಪ್ರಶಸ್ತಿ
18.ಕರ್ನಾಟಕ ಪರಿಸರ ಪ್ರಶಸ್ತಿ
19.ಮಹಿಳಾರತ್ನ ಪ್ರಶಸ್ತಿ
20.ನ್ಯಾಷನಲ್ ಸಿಟಿಜನ್ ಪ್ರಶಸ್ತಿ
21.ರಾಜ್ಯೋತ್ಸವ ಪ್ರಶಸ್ತಿ
22.ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ವಿಶಾಲಾಕ್ಷಿ ಪ್ರಶಸ್ತಿ.
23.2010 ನೇ ಸಾಲಿನ ಪ್ರತಿಷ್ಠಿತ 'ನಾಡೋಜ' ಪ್ರಶಸ್ತಿ
24.2019 ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅವರಿಗೆ ಪದ್ಮಶ್ರೀ ಪ್ರಶಸ್ತಿ.
25.2020ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ ,
ಅಮೇರಿಕಾದ ಲಾಸ್ ಏಂಜಲೀಸ್ ಮತ್ತು ಓಕ್‌ಲ್ಯಾಂಡ್‌ನಲ್ಲಿರುವ "ತಿಮ್ಮಕ್ಕನ ಸಂಪನ್ಮೂಲಗಳು" ಎಂಬ ಪರಿಸರ ಶಿಕ್ಷಣ ಸಂಸ್ಥೆಗೆ ಅವರ ಹೆಸರಿಡಲಾಗಿದೆ. ಇದು ಅವರ ಅಂತಾರಾಷ್ಟ್ರೀಯ ಮಟ್ಟದ ಗುರುತಿಸುವಿಕೆಗೆ ಸಾಕ್ಷಿಯಾಗಿದೆ.
ಇಂತಹ ಮಹಾನ್ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ💐
- ವಿಜಯ ಕರ್ನಾಟಕ

No comments:
Post a Comment