ಕಥೆ-1031
ಲೈಫಲ್ಲಿ ಗೆಲ್ಲಬೇಕು ಅನ್ನೋರು ಇದನ್ನ ಮಿಸ್ ಮಾಡದೇ ಓದಬೇಕು..( ಸರಣಿ-3)
ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು.
ಮುಂದುವರೆಯುವುದು...
No comments:
Post a Comment