Monday, October 23, 2023

(ಕಥೆ-191) ಆಯುಧ ಪೂಜೆ

     ಭಾರತದಾದ್ಯಂತ ಸಾಂಪ್ರದಾಯಿಕವಾಗಿ ನವರಾತ್ರಿ ಮತ್ತು ವಿಜಯದಶಮಿ ಹಬ್ಬ ಆಚರಿಸಲಾಗುತ್ತದೆ.

 ಮೈಸೂರು ಮನೆತನದಲ್ಲಿ ಇಂದಿಗೂ ಸಹ, ಶಸ್ತ್ರಾಸ್ತ್ರಗಳಿಗೆ ಪದ್ಧತಿ ಪ್ರಕಾರ ಪೂಜೆ ಸಲ್ಲಿಸಲಾಗುತ್ತದೆ

ನವರಾತ್ರಿಯ ಕೊನೆಯ ದಿನದ ಆಚರಣೆ ಮಹಾನವಮಿಯಂದು ಆಯುಧ ಪೂಜೆಗೆ ಹೆಚ್ಚಿನ ಮಹತ್ವ. ತರಕಾರಿ ಹೆಚ್ಚುವ ಚಾಕುವಿನಿಂದ ಹಿಡಿದು ದೇಶದ ರಕ್ಷಣೆಗಾಗಿ ಬಳಸಲಾಗುವ ಅತ್ಯಾಧುನಿಕ ಯುದ್ಧ ವಿಮಾನಗಳನ್ನು ಕೂಡ ಆಯುಧ ಪೂಜೆಯಂದು ಪೂಜಿಸಲಾಗುತ್ತದೆ.

ಮೈಸೂರಿನ ವಿಜಯ ದಶಮಿ ಗೆ ವಿಶೇಷ ಪಾರಂಪರಿಕ ಇತಿಹಾಸವಿದೆ. ಚಾಮುಂಡೇಶ್ವರಿ ಮಹಿಷಾಸುರನನ್ನು ನವರಾತ್ರಿಯ ಒಂಬತ್ತನೇ ದಿನದಂದು ಸಂಹರಿಸಿದ ನಂಬಿಕೆಯ ದ್ಯೋತಕವಾಗಿ ಒಂಬತ್ತನೇ ದಿನದಂದು ಆಯುಧ ಪೂಜೆ ಮಾಡಲಾಗುತ್ತದೆ.


ಮಹಾಭಾರತದ ಉಲ್ಲೇಖ

ಇನ್ನು ಮಹಾಭಾರತದಲ್ಲಿ ಆಯುಧ ಪೂಜೆಯ ಸ್ಪಷ್ಟ ಉಲ್ಲೇಖವಿದ್ದು, ದ್ವಾಪರ ಯುಗದಲ್ಲಿ ಪಾಂಡವರು ಹದಿಮೂರು ವರ್ಷಗಳ ವನವಾಸ ಮುಗಿಸುತ್ತಾರೆ. ಬಳಿಕ ಒಂದು ವರ್ಷ ಅಜ್ಞಾತವಾಸ ಮುಗಿಸುತ್ತಾರೆ. ಈ ಅಜ್ಞಾತವಾಸದ ಅಂತಿಮ ದಿನವೇ ವಿಜಯದಶಮಿ. ಅಜ್ಞಾತವಾಸದ ಸಮಯದಲ್ಲಿ ಪಾಂಡವರು ತಮ್ಮ ಶಸ್ತ್ರಾಸ್ತ್ರಗಳನ್ನೆಲ್ಲಾ ಬನ್ನಿ ಮರದಲ್ಲಿ ಬಚ್ಚಿಡುತ್ತಾರೆ. ಅಂದರೆ ತಮ್ಮ ಅಜ್ಞಾತವಾಸ ಮುಗಿದ ದಿನದಂದು ಬನ್ನಿಗಿಡದಲ್ಲಿ ಬಚ್ಚಿಟ್ಟಿದ್ದ ತಮ್ಮ ಶಸ್ತ್ರಾಸ್ತ್ರಗಳನ್ನೆಲ್ಲ ತೆಗೆದು ವಿರಾಟರಾಜನ ಶತ್ರುಗಳ ವಿರುದ್ಧ ಪಾಂಡವರು ವಿಜಯವನ್ನು ಸಾಧಿಸುತ್ತಾರೆ.ಎಂಬ ನಂಬಿಕೆಯ ದ್ಯೋತಕವಾಗಿದೆ...


ಇನ್ನು ಆಯುಧ ಪೂಜೆಯ ಆರಂಭ ನೋಡುವುದಾದರೆ, ಮೊದಲೆಲ್ಲ ಯುದ್ಧಕ್ಕೆ ಹೋಗುತ್ತಿದ್ದ ರಾಜಕುಟುಂಬಸ್ಥರು, ನವರಾತ್ರಿಯ ಒಂಭತ್ತನೇ ದಿನದಂದು ಪೂಜೆ ಸಲ್ಲಿಸುತ್ತಾರೆ. ಇದನ್ನು ಕಂಡ ಪ್ರಜೆಗಳು ಸಹ ತಾವು ಬಳಸುವ ಆಯುಧ, ವಾಹನ, ಅಡಿಗೆಗೆ ಬಳಸುವ ಕತ್ತಿ ಚಾಕುವಿಗೆಲ್ಲ ಪೂಜೆ ಸಲ್ಲಿಸಲು ಶುರು ಮಾಡಿದರು. ಅಂದಿನಿಂದ ಆಯುಧ ಪೂಜೆ ಆರಂಭವಾಯಿತು.

ಆ ಆಯುಧಕ್ಕೆ ಒಂದು ಪೂಜೆ ಸಲ್ಲಲಿ ನಮ್ಮನ್ನು ಕಾಪಾಡುವ ಆಯುಧಕ್ಕೆ ಒಂದು ದಿನವಾದರೂ ವಿಶ್ರಾಂತಿ ಸಿಗಲಿ, ಎಂಬ ಕಾರಣ ....

💐💐💐💐💐

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು