Friday, June 7, 2024

 ಕಥೆ-420

ಇಲ್ಲದ ದೇವರನು ಸುತ್ತಿದರೆ ಅಂತರಂಗ ಶುದ್ದಿಯಾಗುವುದಿಲ್ಲ..

ಗುರುಕುಲದಲ್ಲಿ ಓದುತ್ತಿದ್ದ ಶಿಷ್ಯರು ತಮ್ಮ ಗುರುಗಳ ಬಳಿ ಬಂದು,

"ಗುರುಗಳೇ ನಾವೆಲ್ಲಾ ತೀರ್ಥಯಾತ್ರೆ ಮಾಡಬೇಕು ಎಂದುಕೊಂಡಿದ್ದೇವೆ. ತಾವು ಸಮ್ಮತಿಸಿದರೆ ಪುಣ್ಯಕ್ಷೇತ್ರಗಳಿಗೆ ತೆರಳಿ ಪವಿತ್ರ ಸ್ನಾನ ಮಾಡಿ ದೇವರ ದರ್ಶನ ಮಾಡಿ ಬರುತ್ತೇವೆ" ಎಂದು ಹೇಳಿ ಯಾತ್ರೆಗೆ ಅನುಮತಿ ಕೋರಿದರು.

ನೀವು ತೀರ್ಥಯಾತ್ರೆ ಕೈಗೊಳ್ಳುತ್ತಿರುವ ಉದ್ದೇಶವೇನು? ಎಂದು ಗುರುಗಳು ತಮ್ಮ ಶಿಷ್ಯರಿಗೆ ಕೇಳಿದರು.

ಇದಕ್ಕೆ ಉತ್ತರಿಸಿದ ಶಿಷ್ಯರು,

"ಗುರುಗಳೇ ನಾವು ಅಂತರಂಗ ಶುದ್ಧಿಗಾಗಿ ತೀರ್ಥಯಾತ್ರೆ ಮಾಡುತ್ತಿದ್ದೇವೆ" ಎಂದು ತಿಳಿಸಿದರು.

"ಸಂತೋಷ ಹೋಗಿ ಬನ್ನಿ ಶುಭವಾಗಲಿ" ಎಂದ ಗುರುಗಳು, ಯಾತ್ರೆಗೆ ಹೊರಟ ಶಿಷ್ಯರೆಲ್ಲರಿಗೂ ಒಂದೊಂದು ಹಾಗಲಕಾಯಿ ಕೊಟ್ಟು,

"ಈ ಕಾಯನ್ನೂ ನಿಮ್ಮ ಜೊತೆ ತೆಗೆದುಕೊಂಡು ಹೋಗಿ, ನೀವು ಎಲ್ಲೆಲ್ಲಿ ಸ್ನಾನ ಮಾಡುತ್ತೀರೋ ಅಲ್ಲಿ ಈ ಹಾಗಲ ಕಾಯಿಗೂ ಸ್ನಾನ ಮಾಡಿಸಿ. ನೀವು ಎಲ್ಲೆಲ್ಲಿ ದೇವರ ದರ್ಶನ ಪಡೆಯುತ್ತೀರೋ ಅಲ್ಲಿ ದೇವರ ಪಾದದ ಬಳಿ ಈ ಕಾಯಿಗಳನ್ನು ಇಟ್ಟು ಪೂಜೆ ಮಾಡಿಸಿಕೊಂಡು ಬನ್ನಿ" ಎಂದು ತಿಳಿಸಿದರು.

ಸರಿ ಎಂದ ಶಿಷ್ಯರು ಹಾಗಲಕಾಯಿಯ ಜೊತೆ ಯಾತ್ರೆ ಹೊರಟು ಒಂದು ವಾರದ ಬಳಿಕ ಹಿಂತಿರುಗಿದರು.

ಶಿಷ್ಯರನ್ನು ಕಂಡ ಗುರುಗಳು,

"ಏನು ಕ್ಷೇತ್ರ ದರ್ಶನದಿಂದ ನೀವೆಲ್ಲ ಪುನೀತರಾದಿರಾ ನಿಮ್ಮ ಅಂತರಂಗ ಶುದ್ಧಿಯಾಯಿತೇ?" ಎಂದು ಕೇಳಿದರು.

ಎಲ್ಲ ಶಿಷ್ಯರೂ ಒಕ್ಕೊರಲಿನಿಂದ ಹೌದೆಂದರು.

ಆಗ ಗುರುಗಳು "ನೀವು ಯಾತ್ರೆಗೆ ಹೊರಡುವಾಗ ನಾನು ಕೊಟ್ಟಿದ್ದ ಹಾಗಲಕಾಯಿಗಳಿಗೆ ನದಿಯಲ್ಲಿ ಪವಿತ್ರ ಸ್ನಾನ ಮಾಡಿಸಿದಿರಾ?, ದೇವರ ಬಳಿ ಇಟ್ಟು ಪೂಜೆ ಮಾಡಿಸಿದಿರಾ?" ಎಂದು ಕೇಳಿದರು.

ಶಿಷ್ಯರು ಹೌದೆಂದರು.

"ಸರಿ ಹಾಗಾದರೆ ಈ ಕಾಯಿಗಳನ್ನು ಹಾಕಿ ಇಂದು ಅಡುಗೆ ಮಾಡಿಸಿ" ಎಂದು ಅಪ್ಪಣೆ ಕೊಡಿಸಿದರು.

ಊಟಕ್ಕೆ ಕುಳಿತಾಗ ಹಾಗಲ ಕಾಯಿ ತಿಂದ ಗುರುಗಳು,

"ಅಯ್ಯೋ! !!.. ಇದೇನು ಇಷ್ಟು ಕಹಿಯಾಗಿದೆ?" ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅದಕ್ಕೆ ಉತ್ತರ ಕೊಟ್ಟ ಶಿಷ್ಯ

"ಅಲ್ಲ ಗುರುಗಳೇ ಹಾಗಲ ಕಾಯಿಯ ಗುಣವೇ ಕಹಿ ಅದು ಸಿಹಿ ಆಗಲು ಹೇಗೆ ಸಾಧ್ಯ?" ಎಂದು ಕೇಳಿದರು.


ಆಗ ಗುರುಗಳು ಹೇಳಿದರು

"ಪವಿತ್ರ ಸ್ನಾನ ಮಾಡಿ, ದೇವರ ದರ್ಶನ ಮಾಡಿದ ಮಾತ್ರಕ್ಕೆ ನಿಮ್ಮ ಅಂತರಂಗ ಶುದ್ಧಿ ಆಗುವುದಾದರೆ ಈ ಹಾಗಲ ಕಾಯಿಯೂ ನಿಮ್ಮೊಂದಿಗೆ ಎಲ್ಲ ಕ್ಷೇತ್ರಗಳಲ್ಲಿ ಪವಿತ್ರ ಸ್ನಾನ ಮಾಡಿ ಪುನೀತವಾಗಿದೆ. ದೇವರ ದರ್ಶನದಿಂದ ಇದರ ಅಂತರಂಗ ಶುದ್ಧಿ ಆಗಿರಬೇಕಲ್ಲ. ಹಾಗಾದರೆ ಸಿಹಿ ಆಗುವ ಬದಲು ಕಹಿ ಏಕಾಯಿತು?" ಎಂದು ಪ್ರಶ್ನಿಸಿದರು.


ಗುರುಗಳ ಅಂತರ್ಯ ಅರಿತ ಶಿಷ್ಯರು ತಲೆ ತಗ್ಗಿಸಿ ನಿಂತರು.


ಆಗ ಗುರುಗಳು ಹೇಳಿದರು

"ಮಾಡುವ ಪಾಪವನ್ನೆಲ್ಲಾ ಮಾಡಿ ದೇವರ ಬಳಿ ಹೋದರೆ ನಾವು ಪುನೀತರಾಗುವುದಿಲ್ಲ.

ನಮ್ಮಲ್ಲಿ ದುರ್ಗುಣ ತುಂಬಿಕೊಂಡು ಪುಣ್ಯ ಸ್ನಾನ ಮಾಡಿದರೆ ನಮ್ಮ ಅಂತರಂಗ ಶುದ್ಧಿ ಆಗುವುದಿಲ್ಲ.

ಮೊದಲು ನಮ್ಮ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಬೇಕು

ಧರ್ಮದಿಂದ ನಡೆಯಬೇಕು.

ಎಲ್ಲರನ್ನೂ ನಮ್ಮಂತೆಯೇ ಕಾಣಬೇಕು.

ಮೋಸ, ವಂಚನೆ ಮಾಡಿ, ಜಗತ್ತಿನಲ್ಲಿರುವ ಎಲ್ಲವೂ ನನಗೇ ಬೇಕು ಎನ್ನುವ ಭ್ರಷ್ಟಾಚಾರ ಬದುಕನ್ನು ಬಿಟ್ಟು ಪರೋಪಕಾರಕ್ಕೆ ಜೀವನ ಮೀಸಲಿಟ್ಟಾಗ ಅಂತರಂಗ ಶುದ್ದಿಯಾಗುತ್ತದೆ.ನಾವೂ ಪುನೀತರಾಗುತ್ತೇವೆ.ಇಲ್ಲದ ದೇವರನು ಸುತ್ತಿದರೆ ಅಂತರಂಗ ಶುದ್ದಿಯಾಗುವುದಿಲ್ಲ.. ಎಂದು ಹೇಳಿದರು.

ಈ ಪುಟ್ಟ ಕಥೆ ಎಷ್ಟು ಅರ್ಥಪೂರ್ಣ ಅಲ್ಲವೇ.?

ಯೋಚಿಸೋಣ ಚಿಂತಿಸೋಣ. ಕೃಪೆ :ನೆಟ್.

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು