Friday, July 19, 2024

 ಕಥೆ-461

ಸ್ಪೂರ್ತಿದಾಯಕ ಮಾತು


ಒಬ್ಬ ರಾಜ.. ಅವನ ಸೇನೆಯಲ್ಲಿ ನೂರಾರು ಕುದುರೆ, ಒಂಟೆ, ಆನೆ, ಕಾಲಾಳುಗಳು..


ರಾಜನಿಗೆ ಒಂದು ಆನೆಯ ಮೇಲೆ ಬಲು ಪ್ರೀತಿ. ಪ್ರತಿ ಯುದ್ಧವೇ ಆಗಲಿ ಮತ್ತೇನೇ ಆಗಲಿ ತಾಳ್ಮೆಯಿಂದ ಶ್ರದ್ಧೆಯಿಂದ ತನ್ನ ಕೆಲಸ ಮಾಡಿಕೊಂಡು ಬರುತ್ತಾ ಇತ್ತು..


ಹೀಗೆ ಇರುವಾಗ ಆನೆಗೆ ಕೂಡ ವಯಸ್ಸಾಗ್ತಾ ಬಂತು.. ಕೆಲ್ಸ ಮಾಡೋ ಕ್ಷಮತೆ ಕುಂದಿದಂತೆ ಕಾಣ ತೊಡಗಿತು.


ರಾಜ ಇನ್ನು ಈ ಆನೆಗೆ ತೊಂದರೆ ಕೊಡುವುದು ಬೇಡ ಎಂದು ಅದನ್ನ ಕೆಲಸಕ್ಕೆ ಹಚ್ಚುವುದ ನಿಲ್ಲಿಸಲು ಹೇಳಿದ. ಆನೆ ಮಂಕಾಗತೊಡಗಿತು..

ಒಮ್ಮೆ ನೀರು ಕುಡಿಯಲು ಹೋದ ಆನೆ ಕೆಸರಿನಲ್ಲಿ ಸಿಕ್ಕಿಕೊಂಡು ಬಿಟ್ಟಿತು.. ಎಷ್ಟೇ ಪ್ರಯತ್ನ ಪಟ್ಟರೂ ಹೊರ ಬರಲು ಸಾಧ್ಯವಾಗದೆ ಘಿಳಿಡಲು ತೊಡಗಿತು.. ರಾಜ ಸೈನಿಕರ ಜೊತೆ ಬಂದು ಎಷ್ಟೇ ಪ್ರಯತ್ನ ಪಟ್ಟರೂ ಆನೆ ಕೆಸರಲ್ಲಿ ಹೂತುಕೊಳ್ಳುತ್ತಲೇ ಹೋಯ್ತು .. ರಾಜ ನೊಂದುಕೊಂಡ .. ಮಂತ್ರಿಗಳ ಮುಖ ನೋಡಿದ .. ಒಬ್ಬ ಮಂತ್ರಿ ಸೈನಿಕರ ಕರೆದು ಯುದ್ಧ ಕಹಳೆಯ ದನಿ ಹೊರಡಿಸಲು ಹೇಳಿದ .. ಕಹಳೆಯ ದನಿ ಮೊಳಗಿದಂತೆಲ್ಲಾ ಆನೆ ಕಿವಿ ನಿಮಿರಿಸಿ ಕಣ್ಣರಳಿಸಿ ನೋಡಿ ತನ್ನೆಲ್ಲ ಶಕ್ತಿಯನ್ನು ಹಾಕಿ ಹೊರ ಬಂತು ..ಎಲ್ಲರೂ ಹರ್ಷೋದ್ಘಾರ ಮಾಡಿದರು ...


ಮಂತ್ರಿ ಹೇಳಿದ 'ಶರೀರ ಬಲವೊಂದೇ ಬದುಕಲ್ಲ ಪ್ರಭು, ಬದುಕಲು ಒಳಗಿನಿಂದ ಒಂದು ಸ್ಪೂರ್ತಿ ಬೇಕು.. ನನ್ನ ಅವಶ್ಯಕತೆ ಈ ಜಗತ್ತಿಗಿದೆ ಎಂಬ ಭಾವದ ಪ್ರೇರಣೆ ಬೇಕು...ಆ ಸ್ಪೂರ್ತಿ ಬದುಕಲು ಪ್ರೇರೇಪಿಸಿದಾಗ ಮಾತ್ರ ಬದುಕಲು ಛಲ ಬರುತ್ತದೆ . ಆ ಸ್ಫೂರ್ತಿ ನಮ್ಮ ಮೇಲೆ ನಮ್ಮವರು ಇಟ್ಟಿರುವ ಭರವಸೆ, ಪ್ರೀತಿಗಳಿಂದ ಸಿಗುತ್ತದೆ..... '


ಇದನ್ನು ಅರ್ಥ ಮಾಡಿಕೊಂಡು ತಲೆದೂಗಿದ ರಾಜ, ಆನೆಯ ಬಳಿ ಹೋಗಿ ಹಣೆಗೊಂದು ಮುತ್ತನಿತ್ತ .. ಪ್ರೀತಿಯಿಂದ ಹಿರಿ ಸಲಗದ ಮೈದಡವಿದ.


ಒಂದು ಸಣ್ಣ ಒಳ್ಳೆಯ ಸ್ಪೂರ್ತಿದಾಯಕ ಮಾತು, ಸ್ಪರ್ಶ ಮತ್ತು ನಗು ಬದುಕಿನ ಹಾದಿಯ ಬದಲಿಸಬಲ್ಲುದು ....


ಪ್ರೀತಿ ಅಷ್ಟೇ ಸಾಕು....... ಬದುಕಲು, ಬದುಕಿಸಲು, ಬದುಕನ್ನ ಬದುಕಿಸಲು.

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು