Thursday, August 29, 2024

 ಕಥೆ-502

ಪರರ ಅಪಮಾನ, ನಮಗಿದೆ ಅವಮಾನ. 

ಬಟ್ಟೆ ವ್ಯಾಪಾರಿಯೊಬ್ಬ ಕತ್ತೆ ಹಾಗೂ ಕುದುರೆಯನ್ನು ಸಾಕಿಕೊಂಡಿದ್ದ. ಕತ್ತೆಗೆ ಭಾರವಾದ ಬಟ್ಟೆ ಮೂಟೆಗಳನ್ನು ಹೊರಿಸಿ ಕುದುರೆ ಮೇಲೆ ಕುಳಿತು ಪ್ರಯಾಣ ಆರಂಭಿಸಿದ. ಮಾರ್ಗ ಮಧ್ಯೆ ದಣಿವಾರಿಸಿಕೊಳ್ಳಲು ಮರದಡಿ ವಿರಮಿಸಿದ. ಆಗ ಕುದುರೆ ಮೆಲ್ಲನೆ ಕತ್ತೆಯ ಹತ್ತಿರ ಹೋಗಿ "ಎಂಥಾ ಜನ್ಮವಪ್ಪಾ ನಿಂದೂ? ಜೀವನ ಪೂರ್ತಿ ಭಾರವಾದ ವಸ್ತುಗಳನ್ನು ಹೊತ್ತುಕೊಂಡು ಸಾಗೋದೇ ನಿನ್ನ ಹಣೆ ಬರಹವಾಯ್ತು ಅಲ್ವಾ! ಇಂತಹ ದುರ್ಗತಿ ಯಾರಿಗೂ ಬೇಡಪ್ಪಾ. ಮುಂದಿನ ಜನ್ಮ ಅಂತ ಇದ್ರೆ ಕತ್ತೆಯಾಗಿ ಮಾತ್ರ ಹುಟ್ಟಲಾರೆ." ಎಂದು ಪರಿಹಾಸ್ಯ ಮಾಡಿ ನಕ್ಕಿತು.


ಈ ಮಾತು ಕೇಳಿ ಕತ್ತೆಗೆ ತುಂಬಾ ಅವಮಾನವಾಯಿತು. ಸೊಕ್ಕಿನ ಕುದುರೆಗೆ ಬುದ್ಧಿ ಕಲಿಸುವ ಹುನ್ನಾರ ಮಾಡಿತು. ಕೆಲ ಹೊತ್ತಿನ ನಂತರ ವ್ಯಾಪಾರಿ ಪ್ರಯಾಣ ಮುಂದುವರಿಸಲು ಸರಕನ್ನು ಕತ್ತೆಯ ಮೇಲೆ ಏರಿಸಿದಾಗ ಕತ್ತೆ ಅದನ್ನು ಬೀಳಿಸಿ ತಾನೂ ನೆಲಕ್ಕೆ ಬಿದ್ದು ಒದ್ದಾಡತೊಡಗಿತು. ಇದರಿಂದ ವ್ಯಾಪಾರಿ ತುಂಬಾ ದಿಗಿಲಾಯಿತು. "ಅಯ್ಯೋ ಪಾಪ! ಕತ್ತೆಯ ಆರೋಗ್ಯ ಸರಿಯಿಲ್ಲವೆಂದು ತೋರುತ್ತದೆ" ಎಂದುಕೊಂಡು ಆ ಭಾರವಾದ ಬಟ್ಟೆ ಮೂಟೆಗಳನ್ನು ಕುದುರೆ ಮೇಲೆ ಹೊರಿಸಿ ಪ್ರಯಾಣ ಮುಂದುವರಿಸಿದ. ಕತ್ತೆಯನ್ನು ನಿಂದಿಸಿದ ತಪ್ಪಿಗೆ ಕುದುರೆಗೆ ತಕ್ಕ ಶಿಕ್ಷೆಯಾಯಿತು.

ಯಾವ ಕೆಲಸವೂ ಕೀಳಲ್ಲ ಯಾವ ಕೆಲಸವೂ ಮೇಲಲ್ಲ. ಇನ್ನೊಬ್ಬರ ಕೆಲಸವನ್ನ ಮತ್ತು ಇನ್ನೊಬ್ಬರನ್ನು ಅವಮಾನಗೊಳಿಸಿದಾಗ, ಆ ಅವಮಾನದ ಜೊತೆಗೆ ಶಿಕ್ಷೆಯನ್ನು ಸಹ ನಾವು ಒಂದು ದಿನ ಅನುಭವಿಸಬೇಕಾಗಿರುತ್ತದೆ.

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು