Wednesday, February 12, 2025

 ಕಥೆ-663

ಹಸಿರೆಲೆ ಹಣ್ಣೆಲೆಯಾಗದಿರದೇ?

ಹೋಟೆಲ್ ಮಾಲಿಕ ಎಲೆಯಿಟ್ಟು ಊಟ ಬಡಿಸಲು ಬಗ್ಗುತಿದ್ದಂತೆ ಆ ವ್ಯಕ್ತಿ ಕೇಳಿದರು.....


ಊಟಕ್ಕೆ ಎಷ್ಟಾಗುತ್ತದೆ?


ಮಾಲಿಕ ಉತ್ತರಿಸಿದರು....


ಪೂರ್ಣ ಬೇಕಿದ್ದರೆ 8೦ ರೂಪಾಯಿ, ರೊಟ್ಟಿ ಬೇಡವಾದರೆ 5೦ ರೂಪಾಯಿ....


ಆ ವ್ಯಕ್ತಿ ತನ್ನ ಹರಿದ ಅಂಗಿಯ ಕಿಸೆಯಿಂದ ತೆಗೆದ 50 ರೂಪಾಯಿಯನ್ನು ಮಾಲಿಕನತ್ತ ಚಾಚುತ್ತಾ...


ನನ್ನ ಕೈಯಲ್ಲಿ ಇದುವೇ ಇರೋದು..

ಇದಕ್ಕೆ ಸಿಕ್ಕುವುದು ಕೊಟ್ಟರೆ ಸಾಕು.... ಬರೀ ಅನ್ನವಾದರೂ ಸಾಕು..


ಹಸಿವು ನೀಗಿದರೆ ಸಾಕು..

ಮಧ್ಯಾಹ್ನದಿಂದ ಏನೂ ತಿಂದಿಲ್ಲ....


ಅದು ಹೇಳಬೇಕಾದರೆ ಅವರ ಮಾತುಗಳು ತಡವರಿಸಿದವು....


ಹೋಟೆಲ್ ಮಾಲಿಕ ರೊಟ್ಟಿ ಬಿಟ್ಟು ಬಾಕಿ ಎಲ್ಲಾ ಅವರಿಗೆ ಬಡಿಸಿದರು....


 ಅವರ ಕಣ್ಣಿನಿಂದ ಕಣ್ಣೀರು ಸಣ್ಣದಾಗಿ ಕೆಲ ಜಾರುತಿತ್ತು.ಅದನ್ನು ಉಜ್ಜಿಕೊಂಡು ಸಣ್ಣ ಮಗುವಿನಂತೆ ನಿಧಾನವಾಗಿ ಊಟಮಾಡುವುದನ್ನ ಕಂಡ ಪಕ್ಕದಲ್ಲಿ ಕುಳಿತ ವ್ಯಕ್ತಿ ಕೇಳಿದರು...


ನೀವ್ಯಾಕೆ ಅಳುತಿದ್ದೀರಾ?


ಅವರು ಕೇಳಿದ ವ್ಯಕ್ತಿಯ ಮುಖವನ್ನ ನೋಡಿ ಕಣ್ಣನ್ನು ಉಜ್ಜಿಕೊಂಡು ಹೇಳಿದರು....


ನನ್ನ ಕಳೆದು ಹೋದ ಜೀವನವನ್ನು ನೆನೆದು ಕಣ್ಣೀರು ಬಂತು.. ಮೂರು ಮಕ್ಕಳು ನನಗೆ ಎರಡು ಗಂಡು, ಒಂದು ಹೆಣ್ಣು...

ಮೂರು ಜನರಿಗೂ ಒಳ್ಳೆಯ ಕೆಲಸವಿದೆ... ನನಗೆ ಸಿಕ್ಕದ ಎಲ್ಲಾ ಸೌಭಾಗ್ಯವನ್ನು ನಾನು ಅವರಿಗೆ ನೀಡಿದೆ.... ಅದಕ್ಕಾಗಿ ನಾನು ಕಳೆದು ಕೊಂಡದ್ದು ನನ್ನ ಯೌವನವನ್ನು.... ಮತ್ತು ಗಳಿಸಿದ ಆಸ್ತಿಯನ್ನು.... ಇಪ್ಪತ್ತೆಂಟು ವರುಷದ ಪ್ರವಾಸ ಜೀವನ.....


ಎಲ್ಲದಕ್ಕೂ ನನ್ನ ಬೆನ್ನೆಲುಬಾಗಿದ್ದ ಅವಳು ಮೊದಲೇ ನನ್ನನ್ನು ಒಂಟಿಯಾಗಿಸಿ ಹೊರಟು ಹೋದಳು.... ನನ್ನ ಮಕ್ಕಳು, ಸೊಸೆಯಂದಿರಿಗೆ. ಪಾಲು ಮಾಡುತಿದ್ದಂತೆ ನಾನು ಅವರಿಗೆ ಭಾರವಾಗತೊಡಗಿದೆ.... ನನ್ನನ್ನು ದೂರಲಾರಂಭಿಸಿದರು... ನಾನು ಒಬ್ಬ ಮುದುಕನಲ್ವಾ? ಅವರ ಅಹಾರ ಸೇವನೆಯ ನಂತರವೇ ನಾನು ಕುಳಿತುಕೊಳ್ಳುತಿದ್ದೆ. ಆದರೂ ಬಯ್ಯುತಿದ್ದರು.. ಆಹಾರವೆಲ್ಲಾ ಕಣ್ಣೀರು ಬಿದ್ದು ಉಪ್ಪುರಸ‌ವಾಗುತಿತ್ತು ತಿನ್ನುವಾಗ..ಮೊಮ್ಮಕ್ಕಳು ಕೂಡಾ ನನ್ನ ಜೊತೆ ಮಾತಾಡುತಿರಲಿಲ್ಲ... ಕಾರಣ ಮತನಾಡುವುದ ಕಂಡರೆ ಸೊಸೆಯಂದಿರು ಅವರನ್ನು ಬಯ್ಯುತಿದ್ದರು... ಯಾವಾಗಲು ಅವರದು ಒಂದೇ ಮಾತು ಎಲ್ಲಿಗಾದರು ಹೊರಟು ಹೋಗಬಾರದೇ ಎಂದು... ಮರುಭೂಮಿಯಲ್ಲಿ ಬೆವರು ಸುರಿಸಿ ದುಡಿದು ಉಂಟುಮಾಡಿದ ಹಣದಲ್ಲಿ , ತಿನ್ನದೆಯೂ ಮಲಗದೆಯೂ ನಾನೂ ಅವಳೂ ಕೂಡಿ ಇಟ್ಟ ಹಣದಲ್ಲಿ ಕಟ್ಟಿದ ಮನೆ... ಅವಳ ನೆನಪುಗಳು ಮಲಗಿರೋದು ಆ ಮನೆಯಲ್ಲಿ. ಬಿಟ್ಟು ಹೋಗಲು ಮನಸು ಕೇಳಲಿಲ್ಲ. 

ಅದರೇ ನಿನ್ನೆ ಹೊರಟು ಬಿಟ್ಟೆ... ಸೊಸೆಯ ಒಡವೆ ಕದ್ದೆ ಎಂದು ಮಗ ನನ್ನಲ್ಲಿ ಸಿಟ್ಟುಗೊಂಡ. ಹೊಡೆದಿಲ್ಲ ಭಾಗ್ಯಕ್ಕೆ... ಇನ್ನೂ ಅಲ್ಲಿ ನಿಂತರೆ ಅದೂ ನಡೆಯಬಹುದು.. "ಅಪ್ಪನಿಗೆ ಹೊಡೆದ ಮಗ" ಎಂಬ ಹೆಸರು ಬರಬಾರದಲ್ಲ.,.. ಸಾಯಲು ಭಯವಿಲ್ಲ ಅಲ್ಲದೆ ಇನ್ಯಾರಿಗೆ ಬೇಕಾಗಿ ಬದುಕಬೇಕು. 


ಅವರು ಪೂರ್ತಿ ಊಟ ಮಾಡದೆ ಎದ್ದರು.. ತನ್ನಲ್ಲಿರುವ 50 ರೂಪಾಯಿ ಮಾಲಿಕರೆಡೆಗೆ ಚಾಚಿದರು.. ಮಾಲಕರಂದರು ಬೇಡ ಕೈಯಲ್ಲಿ ಇರಲಿ....


ಯಾವಾಗ ಬೇಕಿದ್ದರು ಇಲ್ಲಿಗೆ ಬರಬಹುದು...


ಆದರೆ ಆ ವ್ಯಕ್ತಿ ಆ 50 ರೂಪಾಯಿ ಅಲ್ಲಿ ಇಟ್ಟು ಹೇಳಿದರು 


ತುಂಬಾ ಸಂತೋಷವಾಯಿತು ನಿಮ್ಮ ಉಪಕಾರಕ್ಕೆ.. 

ಧರ್ಮಕೆ ತಿಂದು ಅಭ್ಯಾಸವಿಲ್ಲ. ಏನೂ ತಿಳಿಯದಿರಿ.. ಬರ್ತೀನಿ ಇನ್ನೊಮ್ಮೆ ಕಾಣುವಾ ಎಂದು ಅವರ ಗಂಟನ್ನು ಎತ್ತಿಕೊಂಡು ಎಲ್ಲಿಗೆಂದಿಲ್ಲದೆ ಅವರಷ್ಟಕೆ ನಡೆದು ಹೋದರು...


ಸ್ವಾಭಿಮಾನವೇ ಜೀವನ ಅಂತ ಬದುಕಿದ ತಂದೆ ತಾಯಿಗಳಿಗೆ ಬೇಡಿ ತಿನ್ನುವ ಸ್ಥಿತಿ ತಂದಿಡಬಾರದು.


ಅದ್ಯಾಕೆ ಎಲ್ಲಾ ಹಸುರು ಎಲೆಗಳೂ ಒಂದು ದಿನ ಹಣ್ಣೆಲೆಯಾಗುತ್ತವೆಯೆಂದು ಯೋಚಿಸಲ್ಲ.?


 ಕೃಪೆ : ನೆಟ್

ನಮ್ಮ ಶಾಲೆ ನಮ್ಮ ಹೆಮ್ಮೆ

SYB

1 / 14
Caption Text
2 / 14
Leaders of our Nation & Future Leaders
3 / 14
March fast and Salute to our Village leaders
4 / 14
ವಿಜ್ಞಾನದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಸಿಹಿ ಸಂಭ್ರಮ
5 / 14
2018-19 ರ 10ನೇ ತರಗತಿ ಬ್ಯಾಚ್
6 / 14
ನಮ್ಮ ಶಾಲೆಯಲ್ಲಿ ರಮೇಶ ಬಲ್ಲಿದ್
7 / 14
ವಿಜ್ಞಾನ ಚಿತ್ರಗಳೊಂದಿಗೆ 2018ರ ಸ್ವಾತಂತ್ರೋತ್ಸವ
8 / 14
ಪುಸ್ತಕ ಪ್ರೇಮ
9 / 14
ಗಣರಾಜ್ಯೋತ್ಸವ
10 / 14
ಶಾಲೆಯಲ್ಲಿ ಯೋಗ ಶಿಬಿರ
11 / 14
ಹಸಿರು ಪಡೆ
12 / 14
ತಮಿಳುನಾಡಿನ ಚೆನ್ನೈ ನಲ್ಲಿ ದ.ಭಾರತ ಮಟ್ಟದ ವಿಜ್ಞಾನ ಸ್ಪರ್ಧೆಯಲ್ಲಿ ನಮ್ಮ ಶಾಲೆ
13 / 14
ಹಳೆ ವಿದ್ಯಾರ್ಥಿಗಳ ಹಸಿರು ಪಡೆಯ ಶ್ರಮಯೇವ ಜಯತೆ
14 / 14
ಹಳೆ ಬೇರು ಹೊಸ ಚಿಗುರು